Cross references
ಯೋಹಾನ 2:19
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
ಯೋಹಾನ 12:16
ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.
ಯೋಹಾನ 14:26
ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.