Cross references
ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು.
ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.
ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು