Home Bibles ಲೂಕ 3:5 · ಕನ್ನಡ ಬೈಬಲ್
ಲೂಕ 3:5 · ಕನ್ನಡ ಬೈಬಲ್

ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು;

Cross references

ಯೆಶಾಯ 2:11

ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.

ಯೆಶಾಯ 35:6

ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.

ಯೆಶಾಯ 40:4

ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.

ಯೆಶಾಯ 42:16

ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.

ಯೆಶಾಯ 45:2

ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.

ಯೆಶಾಯ 49:11

ನನ್ನ ಬೆಟ್ಟ ಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜ ಮಾರ್ಗಗಳನ್ನು ಉನ್ನತಪಡಿಸುವೆನು.

ಯೆಶಾಯ 61:1

ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

ಯೆಹೆಜ್ಕೇಲ 17:24

ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.

ಲೂಕ 1:51

ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;

ಹೆಬ್ರಿಯರಿಗೆ 12:12

ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.

ಯಾಕೋಬ 1:9

ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;

Interlinear

Choose Theme