ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
Cross references
ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು.
ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.
ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;
ಕುರುಬರು ಹೇಳಿದ ವಿಷಯ ಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನ ವಾಕ್ಯವು ಅಧಿಕಾರದಿಂದ ಕೂಡಿದ್ದಾಗಿತ್ತು.
ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ--ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು.
ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.