Home Bibles ಲೂಕ 4:4 · ಕನ್ನಡ ಬೈಬಲ್
ಲೂಕ 4:4 · ಕನ್ನಡ ಬೈಬಲ್

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಮನುಷ್ಯನು ರೊಟ್ಟಿಯಿಂದ ಮಾತ್ರವೇ ಅಲ್ಲ, ಆದರೆ ದೇವರ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.

Cross references

ನಿರ್ಗಮಕಾಂಡ 23:25

ನೀವು ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಬೇಕು. ಆಗ ಆತನು ನಿಮ್ಮ ರೊಟ್ಟಿಯನ್ನೂ ನೀರನ್ನೂ ಆಶೀರ್ವದಿಸುವನು, ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿ ಬಿಡುವೆನು.

ದ್ವಿತೀಯೋಪದೇಶಕಾಂಡ 8:3

ನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು.

ಯೆಶಾಯ 8:20

ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.

ಯೆರೆಮಿಯ 49:11

ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ

ಮತ್ತಾಯ 4:4

ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.

ಮತ್ತಾಯ 6:25

ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ

ಮತ್ತಾಯ 6:31

ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.

ಲೂಕ 4:8

ಯೇಸು ಅವನಿಗೆ ಪ್ರತ್ಯುತ್ತರವಾಗಿ--ಸೈತಾನನೇ, ನನ್ನ ಹಿಂದೆ ಹೋಗು; ಯಾಕಂದರೆ--ನೀನು ನಿನ್ನ ದೇವರಾದ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸತಕ್ಕದ್ದು ಎಂದು ಬರೆದದೆ ಅಂದನು.

ಲೂಕ 4:10

ಆತನು ನಿನ್ನನ್ನು ಕಾಯುವದಕ್ಕೆ ತನ್ನ ದೂತರಿಗೆ ಅಪ್ಪಣೆ ಕೊಡುವನು;

ಲೂಕ 22:35

ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು.

ಯೋಹಾನ 10:34

ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ?

ಎಫೆಸದವರಿಗೆ 6:17

ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.

Interlinear

Choose Theme