Home Bibles ಲೂಕ 5:22 · ಕನ್ನಡ ಬೈಬಲ್
ಲೂಕ 5:22 · ಕನ್ನಡ ಬೈಬಲ್

ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು ಪ್ರತ್ಯುತ್ತರವಾಗಿ ಅವರಿಗೆ--ನೀವು ನಿಮ್ಮ ಹೃದಯಗಳಲ್ಲಿ ಅಂದು ಕೊಳ್ಳುತ್ತಿರುವದೇನು?

Cross references

1 ದಿನವೃತ್ತಾಂತ 28:9

ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.

ಕೀರ್ತನೆಗಳು 139:2

ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;

ಸಾಮೇತಿಗಳು 15:26

ದುಷ್ಟರ ಆಲೋಚನೆಯು ಕರ್ತನಿಗೆ ಅಸಹ್ಯವಾಗಿದೆ; ಶುದ್ಧನ ಮಾತುಗಳು ಸಂತೋಷಕರ ವಾದ ಮಾತುಗಳೇ.

ಯೆಶಾಯ 66:18

ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.

ಯೆಹೆಜ್ಕೇಲ 38:10

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,

ಮತ್ತಾಯ 9:4

ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?

ಮತ್ತಾಯ 12:25

ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.

ಮಾರ್ಕ 8:17

ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ?

ಲೂಕ 24:38

ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ?

ಅಪೋಸ್ತಲರ ಕೃತ್ಯಗಳು 5:3

ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?

ಹೆಬ್ರಿಯರಿಗೆ 4:12

ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.

ಪ್ರಕಟನೆ 2:23

ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.

Interlinear

Choose Theme