ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
Cross references
ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು.
ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.
ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ
ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ.
ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.