Home Bibles ಲೂಕ 7:28 · ಕನ್ನಡ ಬೈಬಲ್
ಲೂಕ 7:28 · ಕನ್ನಡ ಬೈಬಲ್

ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

Cross references

ಮತ್ತಾಯ 11:11

ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.

ಮತ್ತಾಯ 13:16

ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ.

ಲೂಕ 1:14

ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು.

ಲೂಕ 3:16

ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು

ಲೂಕ 9:48

ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ

ಲೂಕ 10:23

ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು.

ಎಫೆಸದವರಿಗೆ 3:8

ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.

ಕೊಲೊಸ್ಸೆಯವರಿಗೆ 1:25

ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು.

ಹೆಬ್ರಿಯರಿಗೆ 11:39

ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.

1 ಪೇತ್ರ 1:10

ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.

Interlinear

Choose Theme