Home Bibles ಲೂಕ 7:46 · ಕನ್ನಡ ಬೈಬಲ್
ಲೂಕ 7:46 · ಕನ್ನಡ ಬೈಬಲ್

ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ತೈಲವನ್ನು ಹಚ್ಚಿದ್ದಾಳೆ.

Cross references

ರೂತ 3:3

ನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ವಸ್ತ್ರಗಳನ್ನು ಧರಿಸಿಕೊಂಡು ಆ ಕಣಕ್ಕೆ ಹೋಗು. ಆದರೆ ಆ ಮನುಷ್ಯನು ಅನ್ನಪಾನಗಳನ್ನು ತೆಗೆದು ಕೊಳ್ಳುವ ವರೆಗೂ ಅವನಿಗೆ ನೀನು ತಿಳಿಯದಂತೆ ಮರೆಯಾಗಿರು.

2 ಸಮುವೇಲ 14:2

ತೆಕೋವದಿಂದ ಜ್ಞಾನವುಳ್ಳ ಒಬ್ಬ ಸ್ತ್ರೀಯನ್ನು ಕರೇ ಕಳುಹಿಸಿ ಅವಳಿಗೆ ನಿನ್ನನ್ನು ಬೇಡಿಕೊಳ್ಳುವದೇನಂದರೆ--ನೀನು ಗೋಳಾ ಡುವವಳ ಹಾಗೆ ನಟನೆ ಮಾಡಿ ಶೋಕವಸ್ತ್ರಗಳನ್ನು ಧರಿಸಿಕೊಂಡು

ಕೀರ್ತನೆಗಳು 23:5

ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.

ಕೀರ್ತನೆಗಳು 104:15

ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.

ಸಭಾಪ್ರಸಂಗಿ 9:8

ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಯಲ್ಲಿ ಎಣ್ಣೆಯು ಕಡಿಮೆ ಯಾಗದಿರಲಿ.

ದಾನಿಯೇಲ 10:3

ಆ ಮೂರು ಪೂರ್ಣವಾರಗಳು ಕಳೆಯುವವರೆಗೂ ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸ ವನ್ನಾದರೂ ದ್ರಾಕ್ಷಾರಸವನ್ನಾದರೂ ನನ್ನ ಬಾಯಿಯ ಮುಂದೆ ತರಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.

ಆಮೋಸ 6:6

ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.

ಮೀಕ 6:15

ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.

ಮತ್ತಾಯ 6:17

ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.

Interlinear

Choose Theme