Home Bibles ಲೂಕ 7:8 · ಕನ್ನಡ ಬೈಬಲ್
ಲೂಕ 7:8 · ಕನ್ನಡ ಬೈಬಲ್

ನಾನು ಸಹ ಅಧಿಕಾರದ ಕೆಳಗಿರುವವನು; ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ--ಹೋಗು ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ನನ್ನ ಸೇವಕನಿಗೆ--ಇದನ್ನು ಮಾಡು ಅಂದರೆ ಅವನು ಅದನ್ನು ಮಾಡುತ್ತಾನೆ ಎಂದು ಹೇಳಿ ಕಳುಹಿಸಿ

Cross references

ಅಪೋಸ್ತಲರ ಕೃತ್ಯಗಳು 10:7

ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು

ಅಪೋಸ್ತಲರ ಕೃತ್ಯಗಳು 22:25

ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್‌ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.

ಅಪೋಸ್ತಲರ ಕೃತ್ಯಗಳು 23:17

ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 23:23

ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ,

ಅಪೋಸ್ತಲರ ಕೃತ್ಯಗಳು 23:26

ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.

ಅಪೋಸ್ತಲರ ಕೃತ್ಯಗಳು 23:31

ಆಗ ತಮಗೆ ಅಪ್ಪಣೆಯಾದಂತೆ ಸೈನಿಕರು ಪೌಲನನ್ನು ರಾತ್ರಿಯ ಸಮಯದಲ್ಲಿ ಅಂತಿಪತ್ರಿಗೆ ಕರೆದುಕೊಂಡು ಹೋದರು.

ಅಪೋಸ್ತಲರ ಕೃತ್ಯಗಳು 24:23

ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು.

ಅಪೋಸ್ತಲರ ಕೃತ್ಯಗಳು 25:26

ಈ ಮನುಷ್ಯನ ವಿಷಯವಾಗಿ ನನ್ನ ದೊರೆಗೆ ಬರೆಯುವದಕ್ಕಾಗಿ ನಿರ್ದಿಷ್ಟವಾದದ್ದೇನೂ ಇಲ್ಲ; ಆದಕಾರಣ ವಿಚಾರಣೆ ಯಾದನಂತರ ಬರೆಯುವದಕ್ಕೆ ನನಗೆ ಏನಾದರೂ ಸಿಕ್ಕುವದೆಂದು ನಿಮ್ಮ ಮುಂದೆ ವಿಶೇಷವಾಗಿ ಅರಸನಾದ ಓ ಅಗ್ರಿಪ್ಪನೇ, ನಿನ್ನ ಮುಂದೆ ಇವನನ್ನು ನಾನು ತಂದಿದ್ದೇನೆ.ಸೆರೆಯವನಿಗೆ ವಿರೋಧವಾಗಿ ಹೊರಿಸಲ್ಪಟ್ಟ ಅಪರಾಧಗಳನ್ನು ಸೂಚಿಸುವದಕ್ಕೆ ಏನೂ ಇಲ್ಲದೆ ಅವನನ್ನು ಕಳುಹಿಸುವದು ಯುಕ್ತವಲ್ಲ ಎಂಬದಾಗಿ ನನಗೆ ಕಾಣುತ್ತದೆ ಎಂದು ಹೇಳಿದನು.

ಕೊಲೊಸ್ಸೆಯವರಿಗೆ 3:22

ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ.

1 ತಿಮೋಥೆಯ 6:1

ದೇವರ ನಾಮಕ್ಕೂ ಆತನ ಬೋಧನೆಗೂ ದೂಷಣೆ ಉಂಟಾಗದಂತೆ ನೊಗದ ಅಧೀನದಲ್ಲಿರುವ ಸೇವಕರೆಲ್ಲರೂ ತಮ್ಮ ಸ್ವಂತ ಯಜಮಾನರನ್ನೂ ಎಲ್ಲಾ ಮಾನಕ್ಕೂ ಯೋಗ್ಯರೆಂದೆ ಣಿಸಲಿ.

Interlinear

Choose Theme