Home Bibles ಲೂಕ 8:42 · ಕನ್ನಡ ಬೈಬಲ್
ಲೂಕ 8:42 · ಕನ್ನಡ ಬೈಬಲ್

ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು.

Cross references

ಆದಿಕಾಂಡ 44:20

ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು.

ಯೋಬ 1:18

ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ

ಯೋಬ 4:20

ಬೆಳಗಿ ನಿಂದ ಸಂಜೆಯ ವರೆಗೆ ಅವರು ನಾಶವಾಗುತ್ತಾರೆ. ಅವರು ಲಕ್ಷ್ಯವಿಲ್ಲದೆ ನಿತ್ಯ ನಾಶವಾಗುತ್ತಾರೆ.ಅವ ರಲ್ಲಿರುವ ಅವರ ಶ್ರೇಷ್ಠತೆ ಹೊರಟು ಹೋಗುವ ದಿಲ್ಲವೋ? ಅವರು ಜ್ಞಾನವಿಲ್ಲದೆ ಸಾಯುತ್ತಾರೆ.

ಕೀರ್ತನೆಗಳು 90:5

ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ.

ಕೀರ್ತನೆಗಳು 103:15

ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ.

ಸಭಾಪ್ರಸಂಗಿ 6:12

ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.

ಯೆಹೆಜ್ಕೇಲ 24:16

ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.

ಯೆಹೆಜ್ಕೇಲ 24:25

ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ

ಜೆಕರ್ಯ 12:10

ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.

ಮಾರ್ಕ 5:24

ಆಗ ಯೇಸು ಅವನ ಸಂಗಡ ಹೋದನು; ಮತ್ತು ಬಹಳ ಜನರು ನೂಕಾಡುತ್ತಾ ಆತನ ಹಿಂದೆ ಹೋದರು.

ಲೂಕ 7:12

ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.

ಲೂಕ 8:45

ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು.

ರೋಮಾಪುರದವರಿಗೆ 5:12

ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.

Interlinear

Choose Theme