ಆ ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು.
Cross references
ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು.
ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ.
ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.
ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
ನಾನು ಎಫ್ರಾಯಾಮನ್ನು ಬಲ್ಲೆನು ಮತ್ತು ಇಸ್ರಾ ಯೇಲು ನನಗೆ ಮರೆಯಾಗಿಲ್ಲ; ಓ ಎಫ್ರಾಯಾಮೇ, ನೀನು ಈಗಲೇ ವ್ಯಭಿಚಾರಮಾಡುತ್ತೀ, ಇಸ್ರಾಯೇಲು ಸಹ ಅಪವಿತ್ರವಾಯಿತು.
ಎಫ್ರಾಯಾಮು ನಡುಗುತ್ತಾ ಮಾತನಾಡಿದಾಗ ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು; ಆದರೆ ಬಾಳನ ವಿಷಯದಲ್ಲಿ ಅವನು ಅಪರಾಧಿಯಾದ ಮೇಲೆ ಸತ್ತನು.
ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.
ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.
ಅವರಲ್ಲಿ ಒಬ್ಬನು ತಾನು ಸ್ವಸ್ಥ ವಾದದ್ದನ್ನು ನೋಡಿ ಹಿಂದಿರುಗಿ ಬಂದು ಮಹಾ ಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ
ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.
ಇದಲ್ಲದೆ ನಾನು ನಿಮ್ಮ ಬಳಿಯಲ್ಲಿದ್ದಾಗ ಬಲಹೀನನೂ ಭಯಪಡುವವನೂ ಬಹುನಡುಗು ವವನೂ ಆಗಿದ್ದೆನು.
ನೀವು ಭಯದಿಂದ ನಡಗುವವರಾಗಿ ಅವನನ್ನು ಸೇರಿಸಿ ಕೊಂಡದ್ದರಲ್ಲಿ ನಿಮ್ಮೆಲ್ಲರ ವಿಧೇಯತೆಯನ್ನು ಅವನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನ ಮಮತೆಯು ಹೆಚ್ಚಾಗುವದು.ಸರ್ವವಿಷಯದಲ್ಲೂ ನಿಮ್ಮನ್ನು ಕುರಿತು ನನಗೆ ಭರವಸವಿರುವದರಿಂದ ಸಂತೋಷಪಡುತ್ತೇನೆ.
ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.