Home Bibles ಲೂಕ 8:5 · ಕನ್ನಡ ಬೈಬಲ್
ಲೂಕ 8:5 · ಕನ್ನಡ ಬೈಬಲ್

ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.

Cross references

ಆದಿಕಾಂಡ 15:11

ಪಕ್ಷಿಗಳು ಆ ಶವಗಳ ಮೇಲೆ ಇಳಿದು ಬಂದಾಗ ಅಬ್ರಾಮನು ಅವುಗಳನ್ನು ಓಡಿಸಿದನು.

ಕೀರ್ತನೆಗಳು 119:118

ನಿನ್ನ ನಿಯಮಗಳಿಂದ ತಪ್ಪಿದವರೆಲ್ಲರನ್ನು ನೀನು ತುಳಿದುಬಿಟ್ಟಿದ್ದೀ; ಅವರಲ್ಲಿ ಮೋಸವೂ ಸುಳ್ಳೂ ಇತ್ತು.

ಮತ್ತಾಯ 5:13

ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.

ಮತ್ತಾಯ 13:3

ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.

ಮತ್ತಾಯ 13:18

ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:

ಮತ್ತಾಯ 13:24

ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.

ಮತ್ತಾಯ 13:37

ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು;

ಮಾರ್ಕ 4:2

ಆತನು ಸಾಮ್ಯಗಳಲ್ಲಿ ಅವರಿಗೆ ಅನೇಕ ವಿಷಯಗಳನ್ನು ಕಲಿಸಿ ತನ್ನ ಬೋಧನೆ ಯಲ್ಲಿ ಅವರಿಗೆ ಹೇಳಿದ್ದೇನಂದರೆ--

ಮಾರ್ಕ 4:15

ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ.

ಮಾರ್ಕ 4:26

ಆತನು ಹೇಳಿದ್ದೇನಂದರೆ--ಒಬ್ಬ ಮನುಷ್ಯನು ಬೀಜವನ್ನು ಭೂಮಿಯಲ್ಲಿ ಹಾಕಿದಂತೆಯೇ ದೇವರ ರಾಜ್ಯವು ಇದೆ.

ಲೂಕ 8:11

ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ.

ಹೆಬ್ರಿಯರಿಗೆ 2:1

ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.

ಯಾಕೋಬ 1:23

ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು.

Interlinear

Choose Theme