Home Bibles ಲೂಕ 9:12 · ಕನ್ನಡ ಬೈಬಲ್
ಲೂಕ 9:12 · ಕನ್ನಡ ಬೈಬಲ್

ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆ--ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು; ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು.

Cross references

ಕೀರ್ತನೆಗಳು 78:19

ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು.

ಯೆಹೆಜ್ಕೇಲ 34:25

ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.

ಹೊಶೇಯ 13:5

ನಾನು ನಿನ್ನನ್ನು ಅರಣ್ಯದಲ್ಲಿಯೂ ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ.

ಮತ್ತಾಯ 14:15

ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು.

ಮತ್ತಾಯ 15:23

ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು.

ಮತ್ತಾಯ 15:32

ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು

ಮಾರ್ಕ 6:35

ಆಗಲೇ ಹಗಲು ಬಹಳ ಮಟ್ಟಿಗೆ ಕಳೆದದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅರಣ್ಯ ಸ್ಥಳ ಮತ್ತು ಈಗ ಸಮಯವು ಬಹಳವಾಗಿ ದಾಟಿದೆ;

ಯೋಹಾನ 6:1

ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು.

ಯೋಹಾನ 6:5

ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು.

Interlinear

Choose Theme