Home Bibles ಲೂಕ 9:13 · ಕನ್ನಡ ಬೈಬಲ್
ಲೂಕ 9:13 · ಕನ್ನಡ ಬೈಬಲ್

ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.

Cross references

ಅಂಕೆಗಳ ಪುಸ್ತಕ 11:21

ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ.

2 ಅರಸುಗಳು 4:42

ಇದಲ್ಲದೆ ಬಾಳ್‌ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು.

ಸಾಮೇತಿಗಳು 11:24

ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.

ಮತ್ತಾಯ 14:16

ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು.

ಮಾರ್ಕ 6:37

ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವೇ ಅವರಿಗೆ ತಿನ್ನುವದಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು ಆತನಿಗೆ--ನಾವು ಹೋಗಿ ಎರಡು ನೂರು ಹಣದ (ಪೆನ್ನಿ: ಇಂಗ್ಲೀಷ್‌ಹಣ) ರೊಟಿಯನ್ನು ಕೊಂಡುಕೊಂಡು ಅವರಿಗೆ ತಿನ್ನುವದಕ್ಕೆ ಕೊಡೋಣವೋ ಅಂದರು.

ಯೋಹಾನ 6:5

ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು.

Interlinear

Choose Theme