Home Bibles ☰ Books ಲೂಕ 9:17 · ಕನ್ನಡ ಬೈಬಲ್
ಲೂಕ 9:17 · ಕನ್ನಡ ಬೈಬಲ್

ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.

Cross references

2 ಅರಸುಗಳು 4:44

ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.

ಕೀರ್ತನೆಗಳು 37:16

ನೀತಿವಂತನಿಗಿರುವ ಸ್ವಲ್ಪ ವಾದದ್ದು ಅನೇಕ ದುಷ್ಟರ ಐಶ್ವರ್ಯಕ್ಕಿಂತಲೂ ಶ್ರೇಷ್ಠ ವಾಗಿದೆ.

ಕೀರ್ತನೆಗಳು 107:9

ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ.

ಸಾಮೇತಿಗಳು 13:25

ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.

ಮತ್ತಾಯ 14:20

ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು.

ಮತ್ತಾಯ 15:37

ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.

ಮತ್ತಾಯ 16:9

ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ?

ಮಾರ್ಕ 6:42

ಅವರೆಲ್ಲರೂ ತಿಂದು ತೃಪ್ತರಾದರು.

ಮಾರ್ಕ 8:8

ಅವರೆಲ್ಲರೂ ತಿಂದು ತೃಪ್ತರಾ ದರು; ಮುರಿದ ಮಿಕ್ಕತುಂಡುಗಳನ್ನು ಅವರು ಏಳು ಪುಟ್ಟಿ ತುಂಬಿದರು.

ಮಾರ್ಕ 8:19

ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು.

ಯೋಹಾನ 6:11

ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು.

ಫಿಲಿಪ್ಪಿಯವರಿಗೆ 4:18

ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ

Interlinear

Choose Theme