ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.
Cross references
ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು.
ಬೇರೆಯವರು--ಈತನು ಎಲೀಯನು ಅಂದರು; ಇನ್ನು ಕೆಲವರು--ಈತನು ಒಬ್ಬ ಪ್ರವಾದಿಯಾಗಿದ್ದಾನೆ ಇಲ್ಲವೆ ಪ್ರವಾದಿಗಳಲ್ಲಿ ಒಬ್ಬ ನಂತೆ ಇದ್ದಾನೆ ಅಂದರು.
ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಯಾಕಂದರೆ ಯೋಹಾನನು ಸತ್ತವರೊಳಗಿಂದ ಎದ್ದಿ ದ್ದಾನೆಂದು ಕೆಲವರು ಹೇಳುತ್ತಿದ್ದರು.
ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು.
ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು.
ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು.
ಅವರು ತಿರಿಗಿ ಕುರುಡನಿಗೆ--ನಿನ್ನ ಕಣ್ಣುಗಳನ್ನು ತೆರೆದಾತನ ವಿಷಯವಾಗಿ ನೀನು ಏನು ಹೇಳುತ್ತೀ ಅಂದಾಗ ಅವನು--ಆತನು ಒಬ್ಬ ಪ್ರವಾದಿ ಅಂದನು.