ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು.
Cross references
ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು.
ಸೈನ್ಯಗಳ ಓ ಕರ್ತನೇ, ನನ್ನ ಅರಸನೇ, ನನ್ನ ದೇವರೇ, ಹೌದು ಗುಬ್ಬಿಯು ಮನೆಯನ್ನೂ ಬಾನಕ್ಕೀಯು ತನ್ನ ಮರಿಗ ಳನ್ನಿಡುವ ಗೂಡನ್ನೂ ನಿನ್ನ ಬಲಿಪೀಠಗಳ ಬಳಿಯಲ್ಲಿ ಕಂಡುಕೊಂಡವೆ.
ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
ಆದದರಿಂದ ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ--ಇದು ಕಠಿಣವಾದ ಮಾತು; ಇದನ್ನು ಯಾರು ಕೇಳಾರು ಅಂದರು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?