ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?
Cross references
ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು;
ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ.
ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ.
ಆದರೆ ಅದರಲ್ಲಿ ಯಾವುದಕ್ಕಾದರೂ ಊನತೆ ಇದ್ದರೆ ಅದು ಕುಂಟಾಗಲಿ ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾದರೆ
ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ.
ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.
ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.