ನೀವು ತಿರಿಗಿ ಇದನ್ನು ಮಾಡಿ ದ್ದೀರಿ, ಕರ್ತನ ಬಲಿಪೀಠಗಳನ್ನು ಕಣ್ಣೀರುಗಳಿಂದಲೂ ಅಳುವಿಕೆಯಿಂದಲೂ ಕೂಗುವಿಕೆಯಿಂದಲೂ ಮುಚ್ಚಿ ದ್ದೀರಿ; ಆದದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷ್ಯ ಮಾಡದೆ ಅದನ್ನು ಮೆಚ್ಚಿಕೆಯಾದದ್ದೆಂದು ನಿಮ್ಮ ಕೈಯಿಂದ ಅಂಗೀಕರಿಸುವದಿಲ್ಲ.
Cross references
ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ.
ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.
ಆಗ ಅವರು ಶೀಲೋವಿನಲ್ಲಿ ತಿಂದು ಕುಡಿದ ತರುವಾಯ ಹನ್ನಳು ಎದ್ದುಹೋದಳು. ಯಾಜಕನಾದ ಏಲಿಯು ಕರ್ತನ ಮಂದಿರದ ಸ್ತಂಭದ ಬಳಿಯಲ್ಲಿ ಆಸನದ ಮೇಲೆ ಕುಳಿತಿರುವಾಗ
ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು.
ಆದರೆ ಜನರಿಂದಲೂ ಅವರ ಹೆಂಡತಿಯರಿಂದಲೂ ತಮ್ಮ ಸಹೋದರರಾದ ಯೆಹೂದ್ಯರ ಮೇಲೆ ದೊಡ್ಡ ಕೂಗು ಉಂಟಾಯಿತು.
ಇದಲ್ಲದೆ ತಿರ್ಷತನಾದ ನೆಹೆವಿಾಯನೂ ಶಾಸ್ತ್ರಿ ಯೂ, ಯಾಜಕನೂ ಆದ ಎಜ್ರನೂ ಜನರನ್ನು ಬೋಧಿಸಿದ ಲೇವಿಯರೂ ಜನರೆಲ್ಲರಿಗೆ ಹೇಳಿದ್ದೇ ನಂದರೆ--ಈ ದಿನವು ನಿಮ್ಮ ದೇವರಾಗಿರುವ ಕರ್ತನಿಗೆ ಪರಿಶುದ್ಧವಾದದರಿಂದ ದುಃಖಿಸದೆ, ಅಳದೆ ಇರ್ರಿ. ಯಾಕಂದರೆ ಜನರೆಲ್ಲರು ನ್ಯಾಯಪ್ರಮಾಣದ ಮಾತು ಗಳನ್ನು ಕೇಳಿದಾಗ ಅತ್ತರು.
ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ
ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?
ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.