ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು.
Cross references
ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
ಆಗ ಅವನು ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಓಡಿಹೋಗಿ ಅವನಿಗೆ --ಅಪ್ಪಣೆಯಾದರೆ ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ನಿನ್ನನ್ನು ಹಿಂಬಾಲಿಸುವೆನು ಅಂದನು. ಅವನು ಇವನಿಗೆ--ಹಿಂದಕ್ಕೆ ಹೋಗು; ನಾನು ನಿನಗೆ ಏನು ಮಾಡಿದೆನು ಅಂದನು.ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು.
ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ; ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು
ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,