ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು.
Cross references
ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ.
ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ
ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ.
ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ.