ಅವರು ಆತನನ್ನು ಕಂಡುಕೊಂಡಾಗ ಆತನಿಗೆ--ಎಲ್ಲರೂ ನಿನ್ನನ್ನು ಹುಡುಕುತ್ತಾರೆ ಅಂದದ್ದಕ್ಕೆ
Cross references
ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.
ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.
ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು.
ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.