ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
Cross references
ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ--
ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು.
ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.
ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.
ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ
ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು.
ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.