Home Bibles ಮಾರ್ಕ 1:5 · ಕನ್ನಡ ಬೈಬಲ್
ಮಾರ್ಕ 1:5 · ಕನ್ನಡ ಬೈಬಲ್

ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್‌ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.

Cross references

ಲೇವ್ಯಕಾಂಡ 26:40

ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ

ಯೆಹೋಶುವ 7:19

ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.

ಕೀರ್ತನೆಗಳು 32:5

ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.

ಸಾಮೇತಿಗಳು 28:13

ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.

ಮತ್ತಾಯ 3:5

ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್‌ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು.

ಮತ್ತಾಯ 4:25

ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.

ಯೋಹಾನ 1:28

ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು.

ಯೋಹಾನ 3:23

ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.

ಅಪೋಸ್ತಲರ ಕೃತ್ಯಗಳು 2:38

ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.

ಅಪೋಸ್ತಲರ ಕೃತ್ಯಗಳು 19:18

ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು.

1 ಯೋಹಾನ 1:8

ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.

Interlinear

Choose Theme