ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ;
Cross references
ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು.
ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ.
ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ.
ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.