Home Bibles ಮಾರ್ಕ 10:23 · ಕನ್ನಡ ಬೈಬಲ್
ಮಾರ್ಕ 10:23 · ಕನ್ನಡ ಬೈಬಲ್

ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷರಿಗೆ --ಐಶ್ವರ್ಯವುಳ್ಳವರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಅಂದನು.

Cross references

ಮತ್ತಾಯ 18:3

ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಮತ್ತಾಯ 19:23

ತರುವಾಯ ಯೇಸು ತನ್ನ ಶಿಷ್ಯರಿಗೆ-- ಐಶ್ವರ್ಯ ವಂತನು ಪರಲೋಕ ರಾಜ್ಯದಲ್ಲಿ ಸೇರುವದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಮಾರ್ಕ 3:5

ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.

ಮಾರ್ಕ 5:32

ಆದರೆ ಆತನು ಇದನ್ನು ಮಾಡಿದವಳನ್ನು ಕಾಣಬೇಕೆಂದು ಸುತ್ತಲೂ ನೋಡಿದನು.

ಮಾರ್ಕ 10:15

ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ.

ಲೂಕ 18:24

ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.

ಯೋಹಾನ 3:5

ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.

1 ಕೊರಿಂಥದವರಿಗೆ 1:26

ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.

ಯಾಕೋಬ 2:5

ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

ಯಾಕೋಬ 4:4

ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.

2 ಪೇತ್ರ 1:11

ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.

Interlinear

Choose Theme