ಆಗ ಯೇಸು ಅವರನ್ನು ದೃಷ್ಟಿಸುತ್ತಾ--ಮನುಷ್ಯರಿಗೆ ಇದು ಅಸಾಧ್ಯವಾಗಿದೆ; ಆದರೆ ದೇವರಿಗೆ ಅಲ್ಲ; ಯಾಕಂದರೆ ದೇವರಿಗೆ ಎಲ್ಲವೂ ಸಾಧ್ಯವಾಗಿವೆ ಅಂದನು.
Cross references
ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು?
ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ.
ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.
ನಿನಗೆ ಎಲ್ಲಾ ಸಾಧ್ಯವಾಗಿದೆ; ನಿನಗೆ ಯಾವ ಆಲೋಚನೆಯೂ ತಡೆಯಲ್ಪಡುವದಿಲ್ಲವೆಂದು ತಿಳಿದಿದ್ದೇನೆ.
ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇದು ಈ ದಿವಸಗಳಲ್ಲಿ ಉಳಿದ ಈ ಜನರ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರಿ ದರೂ ಅದು ನನ್ನ ಕಣ್ಣುಗಳಿಗೂ ಸಹ ಆಶ್ಚರ್ಯವಾಗಿ ತೋರುವದೋ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು.
ಅದಕ್ಕೆ ಆತನು--ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ ಎಂದು ಹೇಳಿದನು.
ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.