Home Bibles ಮಾರ್ಕ 10:49 · ಕನ್ನಡ ಬೈಬಲ್
ಮಾರ್ಕ 10:49 · ಕನ್ನಡ ಬೈಬಲ್

ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು.

Cross references

ಕೀರ್ತನೆಗಳು 86:15

ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.

ಕೀರ್ತನೆಗಳು 145:8

ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ.

ಮತ್ತಾಯ 20:32

ಆಗ ಯೇಸು ನಿಂತು ಅವರನ್ನು ಕರೆದು--ನಾನು ನಿಮಗೆ ಏನು ಮಾಡ ಬೇಕೆಂದು ನೀವು ಅಪೇಕ್ಷಿಸುತ್ತೀರಿ ಎಂದು ಕೇಳಿದನು.

ಲೂಕ 18:40

ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ--

ಯೋಹಾನ 11:28

ಆಕೆಯು ಹೀಗೆ ಹೇಳಿದ ಮೇಲೆ ಹೊರಟು ಹೋಗಿ ತನ್ನ ಸಹೋದರಿಯಾದ ಮರಿಯಳನ್ನು ಗುಪ್ತ ವಾಗಿ ಕರೆದು--ಬೋಧಕನು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.

ಹೆಬ್ರಿಯರಿಗೆ 2:17

ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.

ಹೆಬ್ರಿಯರಿಗೆ 4:15

ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.

Interlinear

Choose Theme