Home Bibles ಮಾರ್ಕ 11:25 · ಕನ್ನಡ ಬೈಬಲ್
ಮಾರ್ಕ 11:25 · ಕನ್ನಡ ಬೈಬಲ್

ನೀವು ನಿಂತು ಕೊಂಡು ಪ್ರಾರ್ಥಿಸುವಾಗ ಯಾವನಿಗಾದರೂ ವಿರೋ ಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ; ಆಗ ಪರಲೋಕ ದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ಅಪರಾಧಗಳನ್ನು ನಿಮಗೆ ಕ್ಷಮಿಸುವನು.

Cross references

ಜೆಕರ್ಯ 3:1

ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು.

ಮತ್ತಾಯ 5:23

ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ

ಮತ್ತಾಯ 6:5

ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.

ಮತ್ತಾಯ 6:12

ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.

ಮತ್ತಾಯ 6:14

ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.

ಮತ್ತಾಯ 18:23

ಆದದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತಕ್ಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.

ಲೂಕ 6:37

ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.

ಲೂಕ 18:11

ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.

ಎಫೆಸದವರಿಗೆ 4:32

ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.

ಕೊಲೊಸ್ಸೆಯವರಿಗೆ 3:13

ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.

ಯಾಕೋಬ 2:13

ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.

ಪ್ರಕಟನೆ 11:4

ಭೂಲೋಕದ ದೇವರ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ.

Interlinear

Choose Theme