ಮಾರ್ಕ 12:41 · ಕನ್ನಡ ಬೈಬಲ್
ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು.
Cross references
2 ಅರಸುಗಳು 12:9
ಆದರೆ ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತಕ್ಕೊಂಡು ಅದರ ಮುಚ್ಚಳದಲ್ಲಿ ತೂತನ್ನು ಮಾಡಿ ಬಲಿಪೀಠದ ಬಳಿಯಲ್ಲಿ ಕರ್ತನ ಮನೆಯೊಳಗೆ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಲು ಕಾಯುವ ಯಾಜಕರು ಕರ್ತನ ಮನೆಗೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿ ಹಾಕಿದರು.
ಮತ್ತಾಯ 27:6
ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು.
ಲೂಕ 21:1
ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು.
ಯೋಹಾನ 8:20
ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.