Home Bibles ಮಾರ್ಕ 13:8 · ಕನ್ನಡ ಬೈಬಲ್
ಮಾರ್ಕ 13:8 · ಕನ್ನಡ ಬೈಬಲ್

ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ.

Cross references

2 ದಿನವೃತ್ತಾಂತ 15:6

ಜನಾಂಗವು ಜನಾಂಗದಿಂದಲೂ ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ಯಾಕಂದರೆ ದೇವರು ಸಕಲ ಇಕ್ಕಟ್ಟುಗಳಿಂದ ಅವ ರನ್ನು ತೊಂದರೆಪಡಿಸಿದನು.

ಕೀರ್ತನೆಗಳು 48:6

ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.

ಯೆಶಾಯ 19:2

ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.

ಯೆಶಾಯ 37:3

ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು.

ಯೆರೆಮಿಯ 4:31

ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.

ಯೆರೆಮಿಯ 6:24

ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.

ಯೆರೆಮಿಯ 13:21

ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.

ಯೆರೆಮಿಯ 22:23

ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ?

ಯೆರೆಮಿಯ 49:24

ನಾನು ಬೋನನ್ನು ಇಟ್ಟೆನು; ಹೌದು, ಬಾಬೆಲೇ ನೀನು ಹಿಡಿಯಲ್ಪಟ್ಟಿದ್ದೀ; ಆದರೆ ನಿನಗೆ ತಿಳಿಯದಿತ್ತು; ನೀನು ಕರ್ತನಿಗೆ ವಿರೋಧವಾಗಿ ಜಗಳವಾಡಿದ್ದ ರಿಂದಲೇ ಸಿಕ್ಕಿದ್ದೀ; ವಶಮಾಡಲ್ಪಟ್ಟಿದ್ದೀ;

ಯೆರೆಮಿಯ 50:43

ಅದರ ಪಟ್ಟಣಗಳು ಹಾಳಾದವು; ಅವು ಒಣನೆಲವೂ ಅಡವಿಯೂ ಯಾರೂ ವಾಸಮಾಡದೆ, ಮನುಷ್ಯನ ಮಗನು ಹಾದುಹೋಗದೆ ಇರುವ ದೇಶವೂ ಆಗಿವೆ.

ಮೀಕ 4:9

ಈಗ ಯಾಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶ ವಾದನೋ? ಹೆರುವವಳಂತೆ ನಿನಗೆ ವೇದನೆ ಬಂತು.

ಹಗ್ಗಾಯ 2:22

ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

ಜೆಕರ್ಯ 14:13

ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು.

ಮತ್ತಾಯ 24:8

ಇವೆಲ್ಲವುಗಳು ಸಂಕಟಗಳ ಆರಂಭವು.

ಅಪೋಸ್ತಲರ ಕೃತ್ಯಗಳು 11:28

ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.

1 ತೆಸಲೋನಿಕದವರಿಗೆ 5:3

ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.

ಪ್ರಕಟನೆ 6:4

ಆಗ ಮತ್ತೊಂದು ಕೆಂಪು ಕುದುರೆಯು ಹೊರಗೆ ಹೋಯಿತು; ಅದರ ಮೇಲೆ ಕೂತಿದ್ದವನಿಗೆ ಭೂಮಿಯಿಂದ ಸಮಾಧಾನವನ್ನು ತೆಗೆದುಬಿಡುವ ದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗು ವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಇದಲ್ಲದೆ ಅವನಿಗೆ ದೊಡ್ಡ ಕತ್ತಿಯು ಕೊ

Interlinear

Choose Theme