ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು.
Cross references
ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು.
ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ--
ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು.
ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು; ಆಗ ರಾತ್ರಿಯಾಗಿತ್ತು.