Home Bibles ಮಾರ್ಕ 14:12 · ಕನ್ನಡ ಬೈಬಲ್
ಮಾರ್ಕ 14:12 · ಕನ್ನಡ ಬೈಬಲ್

ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು.

Cross references

ನಿರ್ಗಮಕಾಂಡ 12:6

ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.

ನಿರ್ಗಮಕಾಂಡ 12:8

ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.

ನಿರ್ಗಮಕಾಂಡ 12:18

ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.

ನಿರ್ಗಮಕಾಂಡ 13:3

ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.

ಲೇವ್ಯಕಾಂಡ 23:5

ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು.

ಅಂಕೆಗಳ ಪುಸ್ತಕ 28:16

ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು.

ದ್ವಿತೀಯೋಪದೇಶಕಾಂಡ 16:1

ಆಬೀಬ್‌ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್‌ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;

ಮತ್ತಾಯ 3:15

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.

ಮತ್ತಾಯ 26:17

ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು.

ಲೂಕ 22:7

ಆಗ ಪಸ್ಕದ ಕುರಿಯು ವಧಿಸಲ್ಪಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ದಿನವು ಬಂದಿತು.

1 ಕೊರಿಂಥದವರಿಗೆ 5:7

ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.

ಗಲಾತ್ಯದವರಿಗೆ 4:4

ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ

Interlinear

Choose Theme