Home Bibles ಮಾರ್ಕ 14:22 · ಕನ್ನಡ ಬೈಬಲ್
ಮಾರ್ಕ 14:22 · ಕನ್ನಡ ಬೈಬಲ್

ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.

Cross references

ಆದಿಕಾಂಡ 41:26

ಆ ಏಳು ಒಳ್ಳೇ ಹಸುಗಳು ಏಳು ವರುಷಗಳು; ಏಳು ಒಳ್ಳೇ ತೆನೆಗಳು ಏಳು ವರುಷಗಳೇ; ಅದು ಒಂದೇ ಕನಸು.

ಜೆಕರ್ಯ 5:7

ಇಗೋ, ಸೀಸದ ಮಣವು ಎತ್ತಲ್ಪಟ್ಟಿತು; ಎಫದ ಮಧ್ಯದಲ್ಲಿ ಒಬ್ಬ ಸ್ತ್ರೀ ಕೂತುಕೊಂಡಿದ್ದಳು. ಆಗ ಅವನು --ಇದು ದುಷ್ಟತ್ವವು ಎಂತಂದು

ಮತ್ತಾಯ 14:19

ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.

ಮತ್ತಾಯ 26:26

ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.

ಮಾರ್ಕ 6:41

ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು.

ಮಾರ್ಕ 14:24

ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.

ಲೂಕ 22:18

ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು.

ಲೂಕ 24:30

ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.

ಯೋಹಾನ 6:23

(ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).

ಯೋಹಾನ 6:48

ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ.

1 ಕೊರಿಂಥದವರಿಗೆ 10:4

ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.

1 ಕೊರಿಂಥದವರಿಗೆ 10:16

ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?

1 ಕೊರಿಂಥದವರಿಗೆ 11:23

ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದುಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು

ಗಲಾತ್ಯದವರಿಗೆ 4:25

ಹಾಗರ್‌ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್‌ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.

Interlinear

Choose Theme