Home Bibles ಮಾರ್ಕ 14:43 · ಕನ್ನಡ ಬೈಬಲ್
ಮಾರ್ಕ 14:43 · ಕನ್ನಡ ಬೈಬಲ್

ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು.

Cross references

ಕೀರ್ತನೆಗಳು 2:1

ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?

ಕೀರ್ತನೆಗಳು 3:1

ಕರ್ತನೇ, ನನ್ನನ್ನು ಕಳವಳಪಡಿಸುವವರು ಹೆಚ್ಚಿದ್ದಾರೆ! ನನಗೆ ವಿರೋಧವಾಗಿ ಏಳುವವರು ಅನೇಕರು.

ಕೀರ್ತನೆಗಳು 22:11

ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ.

ಮತ್ತಾಯ 26:47

ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.

ಲೂಕ 22:47

ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.

ಯೋಹಾನ 18:3

ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು.

ಅಪೋಸ್ತಲರ ಕೃತ್ಯಗಳು 1:16

ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.

Interlinear

Choose Theme