ಮಾರ್ಕ 14:51 · ಕನ್ನಡ ಬೈಬಲ್
ಅಲ್ಲಿ ಒಬ್ಬಾನೊಬ್ಬ ಯೌವನಸ್ಥನು ಬರೀ ಮೈಮೇಲೆ ನಾರು ಬಟ್ಟೆಯನ್ನು ಹಾಕಿಕೊಂಡವನಾಗಿ ಆತನನ್ನು ಹಿಂಬಾಲಿಸುತ್ತಿರಲು ಯೌವನಸ್ಥರು ಅವನನ್ನು ಹಿಡಿದರು.
Cross references
ಆದಿಕಾಂಡ 39:12
ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.
ನ್ಯಾಯಾಧಿಪತಿಗಳು 14:12
ಅವರಿಗೆ ಸಂಸೋನನು--ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ನನಗೆ ಅದರ ಅರ್ಥವನ್ನು ನಿಜವಾಗಿ ಹೇಳಿದರೆ ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತು ವಸ್ತ್ರಗಳನ್ನೂ ಕೊಡುವೆನು.