ಆಗ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಹಾಗಾದರೆ ನೀವು ಯೆಹೂದ್ಯರ ಅರಸ ನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕ ನ್ನುತ್ತೀರಿ ಎಂದು ತಿರಿಗಿ ಕೇಳಿದ್ದಕ್ಕೆ--
Cross references
ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ.
ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.
ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು;
ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.
ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
ಆದದರಿಂದ ಪಿಲಾತನು ಯೇಸು ವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಅವರೊಂದಿಗೆ ಮಾತನಾಡಿದನು.
ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.
ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.