ಅವರು ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ತಮ್ಮ ಮೊಣಕಾಲೂರಿ ಆತನಿಗೆ ನಮಸ್ಕರಿಸಿದರು.
Cross references
ಅಬ್ರಹಾಮನ ಸೇವಕನು ಅವರ ಮಾತುಗಳನ್ನು ಕೇಳಿದಾಗ ಕರ್ತನ ಮುಂದೆ ಅಡ್ಡಬಿದ್ದು ಆತನನ್ನು ಆರಾಧಿಸಿದನು.
ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು.
ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.
ಆದಕಾರಣ ಅರಮನೆಯ ಬಾಗಲ ಲ್ಲಿರುವ ಅರಸನ ಸಮಸ್ತ ಸೇವಕರು ಬೊಗ್ಗಿ ಹಾಮಾನ ನಿಗೆ ಅಡ್ಡಬಿದ್ದರು. ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು, ಆದರೆ ಮೊರ್ದೆಕೈ ಬೊಗ್ಗದೆ ಅಡ್ಡಬೀಳದೆ ಇದ್ದನು.
ಆತನು ನಿಮ್ಮನ್ನು ಶೋಧಿಸುವದು ಒಳ್ಳೇದೋ? ಅಥವಾ ಒಬ್ಬ ಮನುಷ್ಯನು ಇನ್ನೊಬ್ಬನನ್ನು ಗೇಲಿಮಾಡುವ ಪ್ರಕಾರ ನೀವೂ ಆತನನ್ನು ಗೇಲಿಮಾಡುವಿರೋ?
ಹುಚ್ಚರ ಮಕ್ಕಳಾಗಿಯೂ ಹೌದು, ಕೆಳಮಟ್ಟದವರ ಮಕ್ಕಳಾಗಿಯೂ ಇದ್ದರು.
ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು.
ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.
ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ.
ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
ಅವನ ಮುಖವು ಮನುಷ್ಯರಿಗಿಂತಲೂ ಅವನ ಆಕಾರವು ನರಪುತ್ರರಿ ಗಿಂತಲೂ ಕುರೂಪವಾಗಿರುವದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
ಈಗ ಓ ಸೈನ್ಯಗಳ ಕುಮಾರ್ತೆಯೇ, ಗುಂಪುಗಳಾಗಿ ಕೂಡಿಕೊಳ್ಳಿರಿ; ಅವನು ನಮಗೆ ಮುತ್ತಿಗೆ ಹಾಕಿದ್ದಾನೆ. ಇಸ್ರಾಯೇಲಿನ ನ್ಯಾಯಾಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.
ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.
ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?
ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
ತರು ವಾಯ ಕೆಲವರು ಆತನ ಮೇಲೆ ಉಗುಳಿ ಆತನ ಮುಖವನ್ನು ಮುಚ್ಚಿ ಆತನನ್ನು ಗುದ್ದುವದಕ್ಕೆ ಆರಂಭಿಸಿ ಆತನಿಗೆ--ಪ್ರವಾದನೆ ಹೇಳು ಅಂದರು. ಆಳು ಗಳು ಆತನನ್ನು ಹೊಡೆದರು.
ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.
ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು.
ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು
ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.