Home Bibles ಮಾರ್ಕ 15:40 · ಕನ್ನಡ ಬೈಬಲ್
ಮಾರ್ಕ 15:40 · ಕನ್ನಡ ಬೈಬಲ್

ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು.

Cross references

ಕೀರ್ತನೆಗಳು 38:11

ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.

ಮತ್ತಾಯ 13:55

ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?

ಮತ್ತಾಯ 27:55

ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.

ಮತ್ತಾಯ 27:61

ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು.

ಮತ್ತಾಯ 28:1

ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.

ಮಾರ್ಕ 15:47

ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.

ಮಾರ್ಕ 16:9

ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.

ಲೂಕ 8:2

ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ

ಲೂಕ 23:49

ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.

ಯೋಹಾನ 19:25

ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.

ಯೋಹಾನ 20:11

ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು; ಆಕೆಯು ಅಳುತ್ತಾ ಸಮಾಧಿಯೊಳಗೆ ಬೊಗ್ಗಿ ನೋಡಿದಾಗ

1 ಕೊರಿಂಥದವರಿಗೆ 9:5

ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?

ಗಲಾತ್ಯದವರಿಗೆ 1:19

ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.

ಯಾಕೋಬ 1:1

ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್‌) ಹನ್ನೆರಡು ಗೋತ್ರದವರಿಗೆ ವಂದನೆ.

Interlinear

Choose Theme