Home Bibles ಮಾರ್ಕ 16:17 · ಕನ್ನಡ ಬೈಬಲ್
ಮಾರ್ಕ 16:17 · ಕನ್ನಡ ಬೈಬಲ್

ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;

Cross references

ಮಾರ್ಕ 9:38

ಯೋಹಾನನು ಆತನಿಗೆ -- ಬೋಧಕನೇ, ನಮ್ಮನ್ನು ಹಿಂಬಾಲಿಸದವನೊಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನು ನಮ್ಮನ್ನು ಹಿಂಬಾಲಿಸುವವನಲ್ಲವಾದ್ದರಿಂದ ನಾವು ಅವನಿಗೆ ಅಡ್ಡಿಮಾಡಿದೆವು ಎಂದು ಹೇಳಿದನು.

ಲೂಕ 10:17

ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ--ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು.

ಯೋಹಾನ 14:12

ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.

ಅಪೋಸ್ತಲರ ಕೃತ್ಯಗಳು 2:4

ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.

ಅಪೋಸ್ತಲರ ಕೃತ್ಯಗಳು 2:33

ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.

ಅಪೋಸ್ತಲರ ಕೃತ್ಯಗಳು 5:16

ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.

ಅಪೋಸ್ತಲರ ಕೃತ್ಯಗಳು 8:7

ಅನೇಕರನ್ನು ಹಿಡಿದಿದ್ದ ಅಶುದ್ಧಾತ್ಮಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥರಾದರು.

ಅಪೋಸ್ತಲರ ಕೃತ್ಯಗಳು 10:46

ಯಾಕಂದರೆ ಅವರು ಭಾಷೆಗಳನ್ನು ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಾ ಇದ್ದದ್ದನ್ನು ಅವರು ಕೇಳಿದರು. ಆಗ ಪೇತ್ರನು--

ಅಪೋಸ್ತಲರ ಕೃತ್ಯಗಳು 16:18

ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.

ಅಪೋಸ್ತಲರ ಕೃತ್ಯಗಳು 19:6

ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.

ಅಪೋಸ್ತಲರ ಕೃತ್ಯಗಳು 19:12

ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.

1 ಕೊರಿಂಥದವರಿಗೆ 12:10

ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.

1 ಕೊರಿಂಥದವರಿಗೆ 12:28

ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ

1 ಕೊರಿಂಥದವರಿಗೆ 12:30

ವಾಸಿ ಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಭಾಷೆಗಳನ್ನಾಡುವರೋ? ಭಾಷೆಗಳ ಅರ್ಥವನ್ನು ಎಲ್ಲರೂ ಹೇಳುವರೋ?ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.

1 ಕೊರಿಂಥದವರಿಗೆ 13:1

ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ.

1 ಕೊರಿಂಥದವರಿಗೆ 14:2

ಭಾಷೆಯನ್ನಾಡುವವನು ದೇವರ ಸಂಗಡಲೇ ಹೊರತು ಮನುಷ್ಯರ ಸಂಗಡ ಮಾತನಾಡು ವದಿಲ್ಲ. ಅವನು ಆತ್ಮನಲ್ಲಿದ್ದು ರಹಸ್ಯಗಳನ್ನು ನುಡಿ ಯುತ್ತಿದ್ದರೂ ಯಾರೂ ಅವನನ್ನು ತಿಳುಕೊಳ್ಳುವದಿಲ್ಲ.

1 ಕೊರಿಂಥದವರಿಗೆ 14:4

ಭಾಷೆಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟು ಮಾಡಿಕೊಳ್ಳುತ್ತಾನೆ. ಪ್ರವಾದಿಸು ವವನಾದರೋ ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡು ತ್ತಾನೆ.

Interlinear

Choose Theme