Home Bibles ಮಾರ್ಕ 16:20 · ಕನ್ನಡ ಬೈಬಲ್
ಮಾರ್ಕ 16:20 · ಕನ್ನಡ ಬೈಬಲ್

ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್‌.

Cross references

ಅಪೋಸ್ತಲರ ಕೃತ್ಯಗಳು 2:1

ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.

ಅಪೋಸ್ತಲರ ಕೃತ್ಯಗಳು 4:30

ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.

ಅಪೋಸ್ತಲರ ಕೃತ್ಯಗಳು 5:12

ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)

ಅಪೋಸ್ತಲರ ಕೃತ್ಯಗಳು 8:4

ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು.

ಅಪೋಸ್ತಲರ ಕೃತ್ಯಗಳು 14:3

ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು.

ಅಪೋಸ್ತಲರ ಕೃತ್ಯಗಳು 14:8

ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.

ರೋಮಾಪುರದವರಿಗೆ 15:19

ಹೀಗೆ ಯೆರೂಸಲೇಮ್‌ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.

1 ಕೊರಿಂಥದವರಿಗೆ 2:4

ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.

1 ಕೊರಿಂಥದವರಿಗೆ 3:6

ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.

2 ಕೊರಿಂಥದವರಿಗೆ 6:1

ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.

ಹೆಬ್ರಿಯರಿಗೆ 2:4

ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.

Interlinear

Choose Theme