Home Bibles ಮಾರ್ಕ 2:10 · ಕನ್ನಡ ಬೈಬಲ್
ಮಾರ್ಕ 2:10 · ಕನ್ನಡ ಬೈಬಲ್

ಆದರೆ ಪಾಪಗಳನ್ನು ಕ್ಷಮಿಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ (ಪಾರ್ಶ್ವವಾಯು ರೋಗಿಗೆ)--

Cross references

ದಾನಿಯೇಲ 7:13

ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.

ಮತ್ತಾಯ 9:6

ಆದರೆ ಮನುಷ್ಯಕುಮಾರನಿಗೆ ಪಾಪ ಗಳನ್ನು ಕ್ಷಮಿಸಿಬಿಡುವದಕ್ಕೆ ಭೂಮಿಯ ಮೇಲೆ ಅಧಿಕಾರ ಉಂಟೆಂದು ನೀವು ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ--ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ಹೇಳಿದನು.

ಮತ್ತಾಯ 16:13

ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು.

ಯೋಹಾನ 5:20

ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.

ಅಪೋಸ್ತಲರ ಕೃತ್ಯಗಳು 5:31

ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.

1 ತಿಮೋಥೆಯ 1:13

ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.

Interlinear

Choose Theme