Home Bibles ಮಾರ್ಕ 2:14 · ಕನ್ನಡ ಬೈಬಲ್
ಮಾರ್ಕ 2:14 · ಕನ್ನಡ ಬೈಬಲ್

ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.

Cross references

ಮತ್ತಾಯ 4:19

ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು.

ಮತ್ತಾಯ 9:9

ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.

ಮಾರ್ಕ 1:17

ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು.

ಮಾರ್ಕ 3:18

ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,

ಲೂಕ 5:27

ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.

ಲೂಕ 6:15

ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ,

ಅಪೋಸ್ತಲರ ಕೃತ್ಯಗಳು 1:13

ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.

Interlinear

Choose Theme