Home Bibles ಮಾರ್ಕ 3:10 · ಕನ್ನಡ ಬೈಬಲ್
ಮಾರ್ಕ 3:10 · ಕನ್ನಡ ಬೈಬಲ್

ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.

Cross references

ಆದಿಕಾಂಡ 12:17

ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು.

ಅಂಕೆಗಳ ಪುಸ್ತಕ 11:33

ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗಿಯುವದಕ್ಕಿಂತ ಮುಂಚೆ ಕರ್ತನ ಕೋಪವು ಜನರಮೇಲೆ ಉರಿದದ್ದರಿಂದ ಆತನು ಜನರನ್ನು ಮಹಾ ದೊಡ್ಡ ವ್ಯಾಧಿಯಿಂದ ಹೊಡೆದನು.

ಮತ್ತಾಯ 4:23

ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.

ಮತ್ತಾಯ 9:20

ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು.

ಮತ್ತಾಯ 12:15

ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.

ಮತ್ತಾಯ 14:14

ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.

ಮತ್ತಾಯ 14:36

ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.

ಮಾರ್ಕ 5:27

ಆಗ ಆಕೆಯು ಯೇಸುವಿನ ವಿಷಯ ಕೇಳಿ ಜನರ ಗುಂಪಿನ ಹಿಂದೆ ಬಂದು ಆತನ ಉಡುಪನ್ನು ಮುಟ್ಟಿ ದಳು.

ಮಾರ್ಕ 5:34

ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.

ಮಾರ್ಕ 6:56

ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ

ಲೂಕ 7:2

ಆಗ ಒಬ್ಬ ಶತಾಧಿಪತಿಗೆ ಪ್ರಿಯನಾಗಿದ್ದ ಆಳು ಅಸ್ವಸ್ಥನಾಗಿ ಸಾಯುವಹಾಗಿದ್ದನು.

ಅಪೋಸ್ತಲರ ಕೃತ್ಯಗಳು 5:15

ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.

ಅಪೋಸ್ತಲರ ಕೃತ್ಯಗಳು 19:11

ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ

ಹೆಬ್ರಿಯರಿಗೆ 12:6

ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.

Interlinear

Choose Theme