Home Bibles ಮಾರ್ಕ 3:11 · ಕನ್ನಡ ಬೈಬಲ್
ಮಾರ್ಕ 3:11 · ಕನ್ನಡ ಬೈಬಲ್

ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.

Cross references

ಮತ್ತಾಯ 4:3

ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.

ಮತ್ತಾಯ 4:6

ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ

ಮತ್ತಾಯ 8:29

ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.

ಮತ್ತಾಯ 8:31

ಆದದರಿಂದ ದೆವ್ವಗಳು ಆತನಿಗೆ--ನೀನು ನಮ್ಮನ್ನು ಹೊರಗೆ ಹಾಕುವದಾದರೆ ಆ ಹಂದಿಗಳ ಗುಂಪಿನೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆ ಕೊಡು ಎಂದು ಬೇಡಿಕೊಂಡವು.

ಮತ್ತಾಯ 14:33

ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.

ಮಾರ್ಕ 1:1

ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾಗಿರುವ ಸುವಾರ್ತೆಯ ಪ್ರಾರಂಭವು.

ಮಾರ್ಕ 1:23

ಆಗ ಅವರ ಸಭಾಮಂದಿ ರದಲ್ಲಿ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು.

ಮಾರ್ಕ 5:5

ಅವನು ರಾತ್ರಿ ಹಗಲು ಯಾವಾಗಲೂ ಬೆಟ್ಟಗಳಲ್ಲಿಯೂ ಸಮಾಧಿಗಳ ಲ್ಲಿಯೂ ಕೂಗುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಕೊಯ್ದುಕೊಳ್ಳುತ್ತಿದ್ದನು.

ಲೂಕ 4:41

ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.

ಲೂಕ 8:28

ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.

ಅಪೋಸ್ತಲರ ಕೃತ್ಯಗಳು 16:17

ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.

ಅಪೋಸ್ತಲರ ಕೃತ್ಯಗಳು 19:13

ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.

ಯಾಕೋಬ 2:19

ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.

Interlinear

Choose Theme