ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ?
Cross references
ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.
ಆತನು ಸಾಮ್ಯಗಳಲ್ಲಿ ಅವರಿಗೆ ಅನೇಕ ವಿಷಯಗಳನ್ನು ಕಲಿಸಿ ತನ್ನ ಬೋಧನೆ ಯಲ್ಲಿ ಅವರಿಗೆ ಹೇಳಿದ್ದೇನಂದರೆ--
ಆದರೆ ಆತನು ಅವರ ಅಲೋಚನೆಗಳನ್ನು ತಿಳಿದವನಾಗಿ ಅವರಿಗೆ--ತನ್ನಲ್ಲಿ ವಿರೋಧವಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುವದು; ಒಂದು ಮನೆಯು ತನಗೆ ವಿರೋಧವಾಗಿ ವಿಭಾಗಿಸಲ್ಪಟ್ಟರೆ ಅದು ಬಿದ್ದು ಹೋಗುವದು.