Home Bibles ಮಾರ್ಕ 3:8 · ಕನ್ನಡ ಬೈಬಲ್
ಮಾರ್ಕ 3:8 · ಕನ್ನಡ ಬೈಬಲ್

ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್‌ ಸೀದೋನ್‌ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.

Cross references

ಅಂಕೆಗಳ ಪುಸ್ತಕ 32:33

ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು.

ಯೆಹೋಶುವ 13:8

ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ:

ಯೆಹೋಶುವ 19:28

ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದು

ಕೀರ್ತನೆಗಳು 45:12

ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.

ಕೀರ್ತನೆಗಳು 87:4

ರಾಹಬನ್ನೂ ಬಾಬೆಲನ್ನೂ ನನ್ನನ್ನು ತಿಳಿದವರಿಗೆ ಜ್ಞಾಪಕಮಾಡುವೆನು; ಫಿಲಿಷ್ಟಿಯವೂ ತೂರಿನ ಸಂಗಡ ಕೂಷನ್ನೂ ನೋಡು: ಈ ಮನುಷ್ಯನು ಅಲ್ಲಿ ಹುಟ್ಟಿ ದನು.

ಯೆಶಾಯ 23:1

ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್‌ ದೇಶದವರಿಂದ ಅವರಿಗೆ ತಿಳಿಯಿತು.

ಯೆಶಾಯ 34:5

ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು.

ಯೆಹೆಜ್ಕೇಲ 26:1

ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

ಯೆಹೆಜ್ಕೇಲ 35:15

ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್‌ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.

ಯೆಹೆಜ್ಕೇಲ 36:5

ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.

ಮಲಾಕಿ 1:2

ನಿಮ್ಮನ್ನು ಪ್ರೀತಿಮಾಡಿದ್ದೇನೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ ನೀವು--ಯಾವದರಲ್ಲಿ ನೀನು ನಮ್ಮನ್ನು ಪ್ರೀತಿಮಾಡಿದ್ದೀ ಎಂದು ಹೇಳುತ್ತೀರಿ. ಕರ್ತನು ಅನು ್ನತ್ತಾನೆ--ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದಾಗ್ಯೂ ನಾನು ಯಾಕೋಬನನ್ನು ಪ್ರೀತಿ ಮಾಡಿ ದೆನು.

ಮತ್ತಾಯ 11:21

ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್‌ ಮತ್ತು ಸೀದೋನ್‌ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.

ಮಾರ್ಕ 7:24

ಅಲ್ಲಿಂದ ಆತನು ಎದ್ದು ತೂರ್‌ ಸೀದೋನ್‌ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.

ಮಾರ್ಕ 7:31

ತಿರಿಗಿ ಆತನು ತೂರ್‌ ಸೀದೋನ್‌ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು.

Interlinear

Choose Theme