Home Bibles ಮಾರ್ಕ 4:8 · ಕನ್ನಡ ಬೈಬಲ್
ಮಾರ್ಕ 4:8 · ಕನ್ನಡ ಬೈಬಲ್

ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.

Cross references

ಆದಿಕಾಂಡ 26:12

ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.

ಯೆಶಾಯ 58:1

ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.

ಮತ್ತಾಯ 13:8

ಆದರೆ ಬೇರೆಯವುಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲಕೊಟ್ಟವು.

ಮತ್ತಾಯ 13:23

ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.

ಮಾರ್ಕ 4:20

ಒಳ್ಳೆಯ ಭೂಮಿಯ ಮೇಲೆ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿ ಅಂಗೀಕರಿಸಿದ ಮೇಲೆ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಕೆಲವರು ನೂರರಷ್ಟು ಫಲಕೊಡುತ್ತಾರೆ ಅಂದನು.

ಲೂಕ 8:8

ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು.

ಲೂಕ 8:15

ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.

ಯೋಹಾನ 1:12

ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.

ಯೋಹಾನ 3:19

ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.

ಯೋಹಾನ 7:17

ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.

ಯೋಹಾನ 15:5

ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.

ಅಪೋಸ್ತಲರ ಕೃತ್ಯಗಳು 17:11

ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.

ಫಿಲಿಪ್ಪಿಯವರಿಗೆ 1:11

ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.

ಕೊಲೊಸ್ಸೆಯವರಿಗೆ 1:6

ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.

ಹೆಬ್ರಿಯರಿಗೆ 4:1

ಹೀಗಿರಲಾಗಿ ಆತನ ವಿಶ್ರಾಂತಿಯಲ್ಲಿ ಸೇರುವೆವೆಂಬ ವಾಗ್ದಾನವು ಇನ್ನೂ ಇರು ವಲ್ಲಿ ನಿಮ್ಮೊಳಗೆ ಯಾವನಾದರೂ ಆದರಿಂದ ತಪ್ಪುವವನಾದಾನೋ ಎಂದು ನಾವು ಭಯಪಡೋಣ.

ಯಾಕೋಬ 1:19

ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.

1 ಪೇತ್ರ 2:1

ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.

Interlinear

Choose Theme