ಮಾರ್ಕ 5:37 · ಕನ್ನಡ ಬೈಬಲ್
ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.
Cross references
ಮಾರ್ಕ 9:2
ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.
ಮಾರ್ಕ 14:33
ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--
ಲೂಕ 8:51
ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ.
ಅಪೋಸ್ತಲರ ಕೃತ್ಯಗಳು 9:40
ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
2 ಕೊರಿಂಥದವರಿಗೆ 13:1
ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.